×
Ad

ಉದ್ಯಾವರ: ಮೂರು ಗ್ರಾಪಂ ವ್ಯಾಪ್ತಿಯ 76 ಕೃಷಿ ಸಾಧಕರಿಗೆ ಸನ್ಮಾನ

Update: 2020-11-09 21:08 IST

ಉಡುಪಿ, ನ.9: ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ಸಮಿತಿಯ ವತಿಯಿಂದ ಉದ್ಯಾವರ, ಕಡೆಕಾರು-ಕುತ್ಪಾಡಿ, ಅಲೆವೂರು ಗ್ರಾಪಂ ವ್ಯಾಪ್ತಿಯ 76 ಕೃಷಿ ಕುಟುಂಬಗಳನ್ನು ಗೌರವಿಸಿ, ಸನ್ಮಾನಿಸಲಾಯಿತು.

ಕಂಬಳದ ಕೋಣಗಳನ್ನು ಗದ್ದೆಗೆ ಇಳಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಡುಪಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಚ್. ಕೆಂಪೇಗೌಡ, ಕೃಷಿಕರು ರಾಜ್ಯ ಮತ್ತು ಕೇಂದ್ರ ಸರಕಾರಗಳಿಂದ ಸಿಗುವ ಸವಲತ್ತು ಗಳನು್ನ ಪಡೆಯಬೇಕು ಎಂದು ಹೇಳಿದರು.

ಉಡುಪಿ ಕ್ರೈಸ್ತ ಧರ್ಮಪ್ರಾಂತದ ಕುಲಪತಿ ವಂ.ಫಾ.ಸ್ಟ್ಯಾನಿ ಬಿ.ಲೋಬೊ ಮಾತನಾಡಿ, ರೈತ ದೇಶದ ಬೆನ್ನೆಲುಬು. ರೈತ ಕಷ್ಟಪಟ್ಟರೆ ನಾವೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ. ಹಿಂದಿನ ಕಾಲದಲ್ಲಿ ಎಲ್ಲರ ಕಸುಬು ಕೃಷಿ ಯಾಗಿತ್ತು. ಆದರೆ ಈಗ ಕಾಲ ಬದಲಾಗಿದೆ. ಕೃಷಿ ಕುಟುಂಬದಿಂದ ಬಂದ ಯುವಕರು ಕೃಷಿ ಬಗ್ಗೆ ಆಸಕ್ತಿ ವಹಿಸದೇ ಇರುವುದರಿಂದ ಕೃಷಿ ಭೂಮಿಗಳು ಪಾಳು ಬಿದ್ದಿವೆ ಎಂದರು.

ಇದೇ ಸಂದರ್ಭದಲ್ಲಿ 3 ಅಶಕ್ತರನ್ನು ಸನ್ಮಾನಿಸಿಲಾಯಿತು. ಉದ್ಯಾವರದ ಪಶು ವೈದ್ಯಾಧಿಕಾರಿ ಡಾ.ಸಂದೀಪ್ ಕುಮಾರ್, ಉಡುಪಿ ತಾಲೂಕು ಕಿಸಾನ್ ಘಟಕದ ಅಧ್ಯಕ್ಷ ಸುಭಾಷಿತ್ ಕುಮಾರ್, ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಜಿಪಂ ಮಾಜಿ ಸದಸ್ಯರಾದ ದಿವಾಕರ್ ಕುಂದರ್, ವಾಮನ ಬಂಗೇರ, ತಾಪಂ ಮಾಜಿ ಉಪಾಧ್ಯಕ್ಷ ಗಣೇಶ್ ಕುಮಾರ್ ಉದ್ಯಾವರ, ಕನ್ನರ್ಪಾಡಿ ಶ್ರೀಜಯದುರ್ಗಾ ಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ, ಅಲೆವೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಹರೀಶ್ ಕಿಣಿ, ಚೈತನ್ಯ ಫೌಂಡೇಶನ್ ಅಧ್ಯಕ್ಷ ಸುನಿಲ್ ಸಾಲ್ಯಾನ್, ಪಾಲ್ಲೊಟ್ಟಯ್ನ್ ಕಾನ್ವೆಂಟ್ನ ಧರ್ಮಭಗಿನಿ ಸಿ. ಮರಿಯಾ, ಐಸಿವೈಎಂ ಅಧ್ಯಕ್ಷ ರೊಯಲ್ ಕ್ಯಾಸ್ತಲಿನೊ ಉಪಸ್ಥಿತರಿದ್ದರು.

ಸಮಿತಿಯ ಅಧ್ಯಕ್ಷ ಮೈಕಲ್ ಡಿಸೋಜ ಸ್ವಾಗತಿಸಿದರು. ಜೂಲಿಯನ್ ದಾಂತಿ ವಂದಿಸಿದರು. ಕಾರ್ಯಕ್ರಮಗಳ ಸಂಚಾಲಕ ಸ್ಟೀವನ್ ಕುಲಾಸೊ ಉ್ಯಾವರ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News