×
Ad

ಯುಜಿ-ನೀಟ್: ಅರ್ಜಿ ಸಲ್ಲಿಕೆಗೆ ನ.12ರವರೆಗೆ ವಿಸ್ತರಣೆ

Update: 2020-11-09 22:32 IST

ಮಂಗಳೂರು, ನ.9: ಪ್ರಸಕ್ತ 202-21ನೇ ಸಾಲಿಗೆ ವೈದ್ಯಕೀಯ/ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಯುಜಿ-ನೀಟ್ 2020ರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನ.12ರವರೆಗೆ ದಿನಾಂಕ ವಿಸ್ತರಿಸಲಾಗಿದೆ.

ನ.12ರಂದು ಮಧ್ಯಾಹ್ನ 2 ಗಂಟೆವರೆಗೆ ಹಾಗೂ ಶುಲ್ಕ ಪಾವತಿಸಲು ನ.12ರಂದು ಸಂಜೆ 5:30ರವರೆಗೆ ವಿಸ್ತರಣೆ ಮಾಡಲಾಗಿದೆ. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.inಗೆ ಭೇಟಿ ನೀಡಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News