370ನೇ ವಿಧಿ ರದ್ದತಿ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ತ್ವರಿತ ವಿಚಾರಣೆ: ಸುಪ್ರೀಂ ಮೆಟ್ಟಲೇರಿದ ಪೀಪಲ್ಸ್ ಕಾನ್ಫರೆನ್ಸ್

Update: 2020-11-09 18:19 GMT

ಶ್ರೀನಗರ,ನ.9: ಸಂವಿಧಾನದ 370ನೇ ವಿಧಿಯ ರದ್ದತಿ ಹಾಗೂ ಜಮ್ಮುಕಾಶ್ಮೀರ ಪುನರ್‌ವಿಂಗಡಣೆ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ತ್ವರಿತ ವಿಚಾರಣೆ ನಡೆಸಬೇಕೆಂದು ಗುಪ್ಕರ್ ಜನತಾ ಮೈತ್ರಿಕೂಟದ ಅಂಗಪಕ್ಷವಾದ ಜಮ್ಮುಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಸುಪ್ರೀಂಕೋರ್ಟ್‌ಗೆ ಸೋಮವಾರ ಮನವಿ ಸಲ್ಲಿಸಿದೆ.

ಕೇಂದ್ರ ಸರಕಾರವು ಕಳೆದ ವರ್ಷದ ಆಗಸ್ಟ್ 6ರಂದು ಸಂವಿಧಾನದ 370 ಹಾಗೂ 35ಎ ಕಲಮುಗಳನ್ನು ರದ್ದುಪಡಿಸಿರುವುದನ್ನು ಪ್ರಶ್ನಿಸಿ ವಿವಿಧ ರಾಜಕೀಯ ಪಕ್ಷಗಳು, ನಾಗರಿಕ, ಸಾಮಾಜಿಕ ಗುಂಪುಗಳು ಹಾಗೂ ವ್ಯಕ್ತಿಗಳು ಸುಪ್ರೀಂಕೋರ್ಟ್‌ನಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಿದ್ದವು.

 ಸಂವಿಧಾನದ 370ನೇ ವಿಧಿಯ ರದ್ದತಿ ಹಾಗೂ ಜಮ್ಮುಕಾಶ್ಮೀರದ ಪುನರ್‌ವಿಂಗಡಣೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕೆಂದು ಕೋರಿ ಜಮ್ಮುಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಸುಪ್ರೀಂಕೋರ್ಟ್‌ನ ಮೆಟ್ಟಲೇರಿದೆ’’  ಎಂದು ಜಮ್ಮುಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಸೋಮವಾರ ಟ್ವೀಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News