ಮನಪಾ, ಶಾಸಕರಿಂದ ತುಘಲಕ್ ದರ್ಬಾರ್: ಮಿಥುನ್ ರೈ ಆರೋಪ

Update: 2020-11-10 07:22 GMT

ಮಂಗಳೂರು, ನ.10: ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಮಂಗಳೂರು ಮಹಾನಗರವನ್ನು ಅಭಿವೃದ್ಧಿಪಡಿಸಲು ಮುಂದಾಗಿರುವ ಬಿಜೆಪಿ ನೇತೃತ್ವದ ಮನಪಾ ಆಡಳಿತ ಮತ್ತು ಶಾಸಕ ವೇದವ್ಯಾಸ ಕಾಮತ್ ತುಘಲಕ್ ದರ್ಬಾರ್ ಮಾಡುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್‌ ರೈ ಆರೋಪಿಸಿದ್ದಾರೆ. 

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ವರ್ಗಕ್ಕೆ ಅನುಭವದ ಕೊರತೆ ಇದೆಯೋ ಅಥವಾ ಹಣ ಇದೆಯೆಂದು ಯಥೇಚ್ಛವಾಗಿ ದುಂದುವೆಚ್ಚ ಮಾಡಲಾಗುತ್ತಿದೆಯೋ ಎಂದು ತಿಳಿಯುತ್ತಿಲ್ಲ. ಬೇಕಾಬಿಟ್ಟಿ ರಸ್ತೆಗಳನ್ನು ಅಗೆದು‌ ಜನಸಾಮಾನ್ಯರಿಗೆ ತೊಂದರೆ ಕೊಡಲಾಗುತ್ತಿದೆ. ಸೋಮವಾರ ನಗರವಿಡೀ ಬ್ಲಾಕ್ ಆಗಿದ್ದು, ಜನರು ತೀವ್ರ ತೊಂದರೆ ಅನುಭವಿಸಿದ್ದಾರೆ.‌ ಕಾಮಗಾರಿ ಇದೀಗ ಆರಂಭಗೊಂಡಿದ್ದು, ಜನರು ಇನ್ನಷ್ಟು ಸಮಸ್ಯೆ ಎದುರಿಸುವ ಸಾಧ್ಯತೆ ಇದೆ. ಹಾಗಾಗಿ ದ.ಕ. ಜಿಲ್ಲಾಧಿಕಾರಿ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೊ, ಮನಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್, ಕಾರ್ಪೊರೇಟರ್‌ಗಳಾದ ಶಶಿಧರ ಹೆಗ್ಡೆ, ಎ.ಸಿ.ವಿನಯರಾಜ್, ನವೀನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News