ಅರ್ನಬ್ ಗೋಸ್ವಾಮಿ ಬಂಧನ ವಿರೋಧಿಸಿ ಪ್ರತಿಭಟನೆ

Update: 2020-11-10 15:46 GMT

ಮಣಿಪಾಲ, ನ.10: ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧಿಸಿರುವ ಮಹಾರಾಷ್ಟ್ರ ಸರಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾದ ವತಿಯಿಂದ ಮಂಗಳವಾರ ಮಣಿಪಾಲ ಟೈಗರ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಕಾರರನ್ನುದ್ದೇಶಿಸಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಯಶ್ಪಾಲ್ ಸುವರ್ಣ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಶೆಟ್ಟಿ, ನಗರಸಭೆ ಸದಸ್ಯ ಪ್ರಭಾಕರ ಪೂಜಾರಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ, ಅಕ್ಷಿತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News