ಹಿರಿಯ ನಾಗರಿಕ ಸಹಾಯವಾಣಿ ಪುನರಾರಂಭಿಸಲು ಶಾಸಕರಿಗೆ ಮನವಿ

Update: 2020-11-10 15:48 GMT

ಉಡುಪಿ ನ.10: ಕಳೆದ ಹಲವು ವರ್ಷಗಳಿಂದ ಹಿರಿಯ ನಾಗರಿಕರ ಕಷ್ಟ ಗಳಿಗೆ ಸ್ಪಂದಿಸುವ ಸಹಾಯವಾಣಿ ಸಿಬ್ಬಂದಿಗಳ ಸಮಸ್ಯೆ ಪರಿಹರಿಸಿ ಸಹಾಯ ವಾಣಿ ಕೇಂದ್ರ ಮೊದಲಿನಂತೆ ಸೇವೆ ನೀಡುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ, ಶಾಸಕ ರಘುಪತಿ ಭಟ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಹಿರಿಯ ನಾಗರಿಕರ ಸಹಾಯವಾಣಿ ಕಾರ್ಯವನ್ನು ನಡೆಸುತ್ತಿದ್ದು ಬೀದಿಗೆ ಬಿದ್ದ ಅಸಹಾಯಕ, ಮನೆಯಿಂದ ನಿರ್ಲಕ್ಷಕ್ಕೊಳಗಾದ, ಮಾನಸಿಕವಾಗಿ ಅಸಹಾಯಕರಾದ ಇನ್ನೂ ಹಲವು ಕಾರಣಗಳಿಂದ ತೊಂದರೆಗೊಳಗಾದವರಿಗೆ ಆಶ್ರಯ ಹಾಗೂ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತ ಬಂದಿದೆ.

ಆದರೆ ಇಲ್ಲಿನ ಸಿಬ್ಬಂದಿಗಳಿಗೆ 15 ತಿಂಗಳ ವೇತನ ಪಾವತಿಯಾಗಿಲ್ಲ. ಇದರಿಂದ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದ ಕಾರಣ ಸಹಾಯವಾಣಿ ಸ್ಥಗಿತಗೊಂಡಿದ್ದು, ಸಂಕಷ್ಟದಲ್ಲಿರುವ ಹಿರಿಯ ನಾಗರಿಕರು ಅಸಹಾಯಕ ರಾಗಿದ್ದಾರೆ. ಆದುದರಿಂದ ತುರ್ತು ಕ್ರಮ ಜರುಗಿಸಿ ಸಹಾಯವಾಣಿಯನ್ನು ಪುನಾರಂಭಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಬಗ್ಗೆ ಮನವಿ ಸ್ವೀಕರಿಸಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ತುರ್ತು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News