ಜ್ಯೋತಿಷಿ ಮಾತು ಕೇಳಿ ಅಭ್ಯರ್ಥಿ ಹಾಕಿದ ಕಾಂಗ್ರೆಸ್: ಡಾ.ಕೆ.ಸುಧಾಕರ್ ವ್ಯಂಗ್ಯ

Update: 2020-11-10 16:15 GMT

ಬೆಂಗಳೂರು, ನ.10: ಜ್ಯೋತಿಷಿಗಳ ಮಾತು ಕೇಳಿ ಅಭ್ಯರ್ಥಿ ಹಾಕದೆ ಜನರ ನಾಡಿಮಿಡಿತ ಅರಿತು ಅಭ್ಯರ್ಥಿ ಹಾಕಿದ್ದರೆ ಬಹುಶಃ ಕಾಂಗ್ರೆಸ್ ಪಕ್ಷಕ್ಕೆ ಇಷ್ಟು ಹೀನಾಯ ಸೋಲು ಅನುಭವಿಸುವ ಪರಿಸ್ಥಿತಿ ಬರುತ್ತಿರಲಿಲ್ಲವೇನೋ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿರತ್ನ ಅವರ ಜನಪರ ಕಾರ್ಯಗಳು ಆರ್.ಆರ್.ನಗರದ ಜನತೆಯ ಮನ ಗೆದ್ದಿದ್ದು ಹ್ಯಾಟ್ರಿಕ್ ಗೆಲುವು ನೀಡುವ ಮೂಲಕ ಮತ್ತೊಮ್ಮೆ ಆಶೀರ್ವಾದ ಮಾಡಿದ್ದಾರೆ ಎಂದು ತಿಳಿಸಿದರು.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಪಕ್ಷದ ಅಭ್ಯರ್ಥಿ ಮುನಿರತ್ನ ಅವರಿಗೆ ಅಭಿನಂದನೆಗಳು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಜನಪರ ಕಾರ್ಯಗಳಿಗೆ ಬೆಂಬಲ ನೀಡಿದ ಜನತೆಗೆ ಮತ್ತು ಗೆಲುವಿಗೆ ಕಾರಣರಾದ ಪಕ್ಷದ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ಅವರು ಹೇಳಿದರು.

ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿ ಡಾ.ರಾಜೇಶ್ ಗೌಡ ಅವರಿಗೆ ಅಭಿನಂದನೆಗಳು. ಈ ಅಭೂತಪೂರ್ವ ವಿಜಯ ಸಾಧಿಸಲು ಶ್ರಮಿಸಿದ ಪಕ್ಷದ ಎಲ್ಲ ನಾಯಕರಿಗೂ ಮತ್ತು ಕಾರ್ಯಕರ್ತರಿಗೂ ಅಭಿನಂದನೆಗಳು ಎಂದು ಸುಧಾಕರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News