ಚಿತ್ರಕಲಾ ಶಿಕ್ಷಕ ಮಹಾಬಲ ಕುಳ

Update: 2020-11-11 03:48 GMT

ಸುಳ್ಯ, ನ11: ಸೋಮವಾರ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಇಲ್ಲಿನ ಚಿತ್ರಕಲಾ ಶಿಕ್ಷಕ, ಸಂಘಟಕ ಪಂಜದ ಮಹಾಬಲ ಕುಳ(55) ಇಂದು ಬೆಳಗ್ಗಿನ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

 ಪಂಜದ ಕೃಷ್ಣನಗರದಲ್ಲಿರುವ ಅವರ ಮನೆಯ ಬಳಿ ಇರುವ ಮರದ ಕೊಂಬೆ ಕಡಿಯಲೆಂದು  ಮರ ಏರಿದ್ದ ವೇಳೆ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ  ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಪಂಜ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದ

 ಮಹಾಬಲ ಕುಳ ಸಂಘಟಕರಾಗಿ, ನಿರೂಪಕರಾಗಿ, ನಾಟಕ ನಿರ್ದೇಶಕರಾಗಿಯೂ ಹೆಸರು ಮಾಡಿದ್ದರು.

ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ, ಪಂಜ ಜೇಸಿಐ ಅಧ್ಯಕ್ಷರಾಗಿ, ಸರಕಾರಿ ನೌಕರರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ