ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ: ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಮೃತ್ಯು

Update: 2020-11-11 05:44 GMT

ರಾಯಚೂರು, ನ.11: ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಗರ ಹೊರವಲಯದ ಮಂತ್ರಾಲಯ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿರುವುದು ವರದಿಯಾಗಿದೆ.

ಮೃತರನ್ನು ಅಭಿಷೇಕ್, ಬಸವರಾಜ್, ಗಣೇಶ್ ಎಂದು ಗುರುತಿಸಲಾಗಿದೆ. ಉಳಿದಂತೆ ಕಾರಿನಲ್ಲಿದ್ದ ಸಿದ್ಧಾರ್ಥ್, ಭೀಮರೆಡ್ಡಿ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಮತ್ತು ಗಾಯಗೊಂಡವರೆಲ್ಲ ಒಂದೇ ಕಾರಿನಲ್ಲಿದ್ದವರು ಎನ್ನಲಾಗಿದ್ದು, ಇವರೆಲ್ಲರೂ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News