ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹಣ ಬಲದಲ್ಲಿ ಉಪಚುನಾವಣೆ ಗೆದ್ದಿರಬಹುದು, ಅದಕ್ಕೀಗ ಆರೋಪ ಮಾಡುತ್ತಿದ್ದಾರೆ: ಡಾ.ಸುಧಾಕರ್

Update: 2020-11-11 08:31 GMT

 ಮೈಸೂರು, ನ.11: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ನಡೆದಿರುವ ಉಪಚುನಾವಣೆಗಳಲ್ಲಿ ಹಣದ ಹೊಳೆ ಹರಿಸಿ ಗೆದ್ದಿರಬಹುದು. ಆ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ ಹಣದ ಹೊಳೆ ಹರಿದಿದೆ ಎಂದು ಹೇಳುತ್ತಿದ್ದಾರೆ ಎಂದು ವೈಧ್ಯಕೀಯ ಸಚಿವ ಡಾ‌.ಕೆ ಸುಧಾಕರ್ ತಿರುಗೇಟು ನೀಡಿದ್ದಾರೆ.

ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಬುಧವಾರ ಆಯೋಜಿಸಿದ್ದ 11ನೇ ಘಟಿಕೋತ್ಸದಲ್ಲಿ ಭಾಗವಹಿಸಿ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಸಿದ್ದರಾಮಯ್ಯ  ಅಧಿಕಾರವದಿಯಲ್ಲಿ ಹಲವು  ಉಪಚುನಾವಣೆ ನಡೆಸಿ ಗೆಲುವು ಸಾಧಿಸಿದ್ದಾರೆ‌. ಆಗ ಅವರು ಹಣದ ಹೊಳೆಯನ್ನೇ ಹರಿಸಿ ಗೆಲುವು ಸಾಧಿಸಿರಬಹುದು. ಅದಕ್ಕೆ ಅವರು ಬಿಜೆಪಿಯವರು ಹಣದ ಹೊಳೆ ಹರಿಸಿ ಗೆದ್ದಿದ್ದಾರೆ ಎಂದು ಹೇಳುತ್ತಿದ್ದಾರೆ ಎಂದರು.

ಕಾಂಗ್ರಸ್ ನವರು ಆರ್‌.ಆರ್.ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದರು. ನಾನು ಈ ಹಿಂದಿನಿಂದಲೂ ಹೇಳುತ್ತಿದ್ದೆ ಮುನಿರತ್ನ 50 ಸಾವಿರ ಅಂತರದಲ್ಲಿ ಗೆಲ್ಲುತ್ತಾರೆ ಎಂದು. ಅದು ನಿಜವಾಗಿದೆ ಎಂದರು.

 ಡಿ.ಕೆ.ಶಿವಕುಮಾರ್ ಅವರ ತಂತ್ರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಾಪ ಯಾಕೆ ಅವರೊಬ್ಬರನ್ನೇ ಹೇಳುತ್ತೀರಿ. ಕಾಂಗ್ರೆಸ್ ನವರ ಯಾವ ಯಾವ ತಂತ್ರವೂ ನಡೆಯಲಿಲ್ಲ ಎಂದು ಸುಧಾಕರ್ ವ್ಯಂಗ್ಯವಾಡಿದರು.

ಇನ್ನು ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮಾಡಬೇಕೊ ಪುನರ್ ರಚನೆ ಮಾಡಬೇಕೊ ಎಂಬುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ಈಗಾಗಲೇ ಮುನಿರತ್ನ ಅವರನ್ನು ಮಂತ್ರಿ ಮಾಡುವುದಾಗಿ ಮುಖ್ಯಮಂತ್ರಿಯವರೇ ಹೇಳಿದ್ದಾರೆ. ಇನ್ನುಳಿದವರಿಗೆ ಅಧಿಕಾರ ನೀಡುವ ಕುರಿತು ಮುಂದಿನ‌ ದಿನಗಳಲ್ಲಿ ಎಲ್ಲವೂ ಸುಖಾಂತ್ಯ ಕಾಣಲಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News