ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ: ಬಿ.ಕೆ.ಹರಿಪ್ರಸಾದ್ ಆರೋಪ

Update: 2020-11-11 12:53 GMT

ಧಾರವಾಡ, ನ.11: ಜಿಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.

ಬುಧವಾರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿನಯ್ ಬಂಧನ ರಾಜಕೀಯ ಪ್ರೇರಿತ. ಸಿಬಿಐ ತನಿಖೆಯ ಅವಶ್ಯಕತೆ ಇಲ್ಲವೆಂದು ಹೈಕೋರ್ಟ್ ಹೇಳಿದೆ. ಪೊಲೀಸರ ತನಿಖೆ ಅಂತಿಮ ಹಂತದಲ್ಲಿತ್ತು. ಆದರೆ, ರಾಜ್ಯ ಸರಕಾರ ತನಿಖೆಯನ್ನು ಸಿಬಿಐಗೆ ನೀಡಿದೆ ಎಂದರು.

ಬಿಜೆಪಿಯವರು ಕಾನೂನು ಉಲ್ಲಂಘಿಸಿ ವಿರೋಧಿಗಳ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ವಿನಯ್ ಕುಲಕರ್ಣಿ, ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧೆ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ವಿನಯ್ ವಿರುದ್ಧ ಸಿಬಿಐ ಅಸ್ತ್ರ ಬಳಸಲಾಗಿದೆ. ಅದಕ್ಕೆ ಇಂಥ ಕೆಲಸ ಮಾಡಿಸುತ್ತಿದ್ದಾರೆ ಎಂದು ದೂರಿದರು.

ಶಿರಾ, ಆರ್‍ಆರ್ ನಗರ ಉಪ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಆರ್‍ಆರ್ ನಗರದಲ್ಲಿ ಗೆದ್ದಿರುವುದು ಮುನಿರತ್ನ ಹೊರತು ಬಿಜೆಪಿ ಅಲ್ಲ. ಮುನಿರತ್ನ ಕೋವಿಡ್ ವೇಳೆ ಕೆಲಸ ಮಾಡಿದ್ದಾರೆ. ಅವರೊಂದಿಗೆ ಕೈ ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುನಿರತ್ನ ಗೆದ್ದಿದ್ದಾರೆ. ನಾವು ಹೀನಾಯವಾಗಿಯೇನೂ ಸೋತಿಲ್ಲ. ರಾಜಕಾರಣದಲ್ಲಿ ಸೋಲು, ಗೆಲುವು ಇರೋದೆ ಎಂದು ಸಮರ್ಥಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News