ಬಿಬಿಎಂಪಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ: ದಿಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ

Update: 2020-11-11 14:26 GMT

ಬೆಂಗಳೂರು, ನ.11: ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸುವುದು ಖಚಿತವಾಗಿದ್ದು, ಶಿಕ್ಷಣ ಮತ್ತು ಆರೋಗ್ಯ ವಿಷಯವನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಿದೆ ಎಂದು ಹೊಸದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಬುಧವಾರ ಬೆಂಗಳೂರಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರದ ಕೆಲಸ ಬರೀ ಜನರಿಂದ ಹಣ ಪಡೆಯುವುದಲ್ಲ. ಜನರಿಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯ ನೀಡುವುದೂ ಸರಕಾರದ ಕೆಲಸವಾಗಿರುತ್ತದೆ ಎಂದು ತಿಳಿಸಿದರು.

ಹೊಸದಿಲ್ಲಿಯ ಮೊಹಲ್ಲಾ ಕ್ಲಿನಿಕ್ ಬೆಂಗಳೂರಿನಲ್ಲಿ ಪ್ರಾರಂಭಿಸಿರುವುದು ಶುಭ ಸೂಚನೆ. ಹೊಸದಿಲ್ಲಿಯಲ್ಲಿ ಸರಕಾರಿ ಶಾಲೆ ಹಾಗೂ ಆರೋಗ್ಯ ಸೇವೆ ಎಲ್ಲ ಕಡೆಯಲ್ಲಿ ಅನುಕರಣೆ ಮಾಡಲಾಗುತ್ತಿದೆ. ಕ್ಲಿನಿಕ್‍ನಲ್ಲಿ ಕೇವಲ ಚಿಕಿತ್ಸೆ ನೀಡುವುದಷ್ಟೇ ಅಲ್ಲ ಔಷಧವನ್ನೂ ಉಚಿತವಾಗಿ ನೀಡುವುದು ಮಹತ್ವದ ಕೆಲಸ. ಈ ಕೆಲಸವನ್ನು ಆಮ್ ಆದ್ಮಿ ಪಕ್ಷ ಬೆಂಗಳೂರಿನಲ್ಲಿ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಬಿಬಿಎಂಪಿ ಚುನಾವಣೆ ಮುಂದಿನ ವರ್ಷದ ಆರಂಭದಲ್ಲಿ ನಡೆಯುವ ಸಾಧ್ಯತೆಗಳಿದ್ದು, ಇದಕ್ಕಾಗಿ ಎಎಪಿ ಪಕ್ಷ ಕೂಡ ಸಿದ್ಧತೆ ನಡೆಸಿದೆ. ಶಾಂತಿನಗರದಲ್ಲಿ ಮೊಹಲ್ಲಾ ಕ್ಲಿನಿಕ್ ಆರಂಭ ಮಾಡಿರುವ ಆಪ್, ಬಿಬಿಎಂಪಿ ಚುನಾವಣಾ ಪ್ರಣಾಳಿಕೆಯಲ್ಲಿ ಮೊಹಲ್ಲಾ ಕ್ಲಿನಿಕ್ ಗಳನ್ನು ತೆರೆಯುವ ಭರವಸೆ ನೀಡುವ ಸಾಧ್ಯತೆ ಇದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News