ಶುಕ್ರವಾರ ರಾಜ್ಯದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

Update: 2020-11-12 14:49 GMT

ಬೆಂಗಳೂರು, ನ.12: ಬಂಗಾಳ ಕೊಲ್ಲಿಯಲ್ಲಿ ಮೈಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಹಲವೆಡೆ ನ.13ರಂದು ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ. ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.

ಈಶಾನ್ಯ ಕಡೆಯಿಂದ ಆರಂಭವಾಗಿರುವ ಮಾರುತಗಳು ಹೆಚ್ಚು ತೇವಾಂಶದಿಂದ ಕೂಡಿರುವುದರಿಂದ ತಂಪಾದ ವಾತಾವರಣ ಕಂಡು ಬರುತ್ತಿದೆ. ಇದರಿಂದ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಅಲ್ಲದೆ, ದೀಪಾವಳಿಯ ನಂತರ ಮತ್ತೊಂದು ಸುತ್ತಿನ ಮಳೆ ಬರುವ ಮುನ್ಸೂಚನೆಗಳಿವೆ. ನ.17, 18ರಂದು ಮತ್ತೆರಡು ದಿನ ಮಳೆ ಬರುವ ಲಕ್ಷಣಗಳಿವೆ ಎಂದು ಹೇಳಿದರು.

ನ.13ರವರೆಗೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಹೆಚ್ಚಿನ ಪ್ರಮಾಣದ ಮಳೆಯಾಗಬಹುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News