ನ. 15ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ

Update: 2020-11-13 18:15 GMT

ಮಂಗಳೂರು, ನ.13: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ 67ನೆ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮಂಗಳೂರಿನಲ್ಲಿ ನ. 15ರಂದು ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಆಯೋಜಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಕಾರ್ಯಕ್ರುದ ಉದ್ಘಾಟನೆ ನಡೆಯಲಿದೆ ಎಂದರು.

ಮಂಗಳೂರಿನ ರಾಜ್ಯ ಮಟ್ಟದ ವಿಶೇಷ ಕಾರ್ಯಕ್ರಮವುಸಹಕಾರಿ ಮಾರಾಟ, ಗ್ರಾಹಕ, ರೂಪಾಂತರ ಮತ್ತು ಮೌಲ್ಯವರ್ಧನೆ ಎಂಬ ಧ್ಯೇಯದೊಂದಿಗೆ ನಡೆಯಲಿದ್ದು, ಸಹಕಾರ ಸಚಿವ ಎಸ್‌ಟಿ. ಸೋಮಶೇಖರ್ ಉದ್ಘಾಟಿಸುವರು. ದೇಶದಲ್ಲಿಯೇ ಮೊದಲ ಬಾರಿಗೆ ಜನರಿಕ್ ಔಷಧಗಳನ್ನು ಸಹಕಾರ ಕ್ಷೇತ್ರದ ಮೂಲಕ ವಿತರಿಸಲು ರಾಜ್ಯ ಸಹಕಾರ ಮಾರಾಟ ಮಹಾ ಮಂಡಲಕ್ಕೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಈ ಯೋಜನೆಗೆ ಈಗಾಗಲೇ ಚಾಲನೆ ದೊರಕಿದ್ದು, ಸಹಕಾರ ಸಪ್ತಾಹ ಸಮಾರಂಭದಲ್ಲಿ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸಾಂಕೇತಿಕವಾಗಿ ಐದು ಪ್ರಾಥಮಿಕ ಸಹಕಾರಿ ಮತ್ತು ಕ್ರೆಡಿಟ್ ಸೊಸೈಟಿಗಳಿಗೆ ಔಷಧಿಗಳ ಮಾರಾಟ ಮಳಿಗೆ ತೆರೆಯಲು ಅನುಪತಿ ಪತ್ರವನ್ನು ವಿತರಿಸಲಾಗುವುದು. ಇದೇ ವೇಳೆ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯನಡೆಯಲಿದೆ. ಉದ್ಘಾಟನಾ ಸಮಾರಂಭಕ್ಕೂ ಮೊದಲು ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಕಾರ್ಯಕ್ರಮ ನಡೆಯಲಿರುವ ಸಭಾಂಗಣದವರೆಗೆ ಸಹಕಾರ ಜಾಥಾ ನಡೆಯಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಹಕಾರ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆ, ಉತ್ತಮ ನವೋದಯ ಸ್ವ ಸಹಾಯ ಸಂಘಗಳಿಗೆ ಪುರಸ್ಕಾರ, ಸಹಕಾರ ಮಳಿಗೆ ಉದ್ಘಾಟನೆ ನಡೆಯಲಿದೆ ಎಂದು ಅವರು ಹೇಳಿದರು.

ಪ್ರಸಕ್ತ ಸಾಲಿನ ಸಹಕಾರ ಸಪ್ತಾಹ ಕಾರ್ಯಕ್ರಮ ನ. 14ರಿಂದ 20ರವರೆಗೆ ಕೊರೊನೋತ್ತರ ಸಹಕಾರ ಸಂಘಗಳ ಜವಾಬ್ಧಾರಿ ಮತ್ತು ಪಾತ್ರ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಳು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮ ಬೆಂಗಳೂರಿನಲ್ಲಿ ಹಾಗೂ ಸಮಾರೋಪ ಕಾರ್ಯಕ್ರಮವನ್ನು ಬಿಜಾಪುರದಲ್ಲಿ ನಡೆಸಲಾಗುವುದು ಎಂದರು.

ಗೋಷ್ಠಿಯಲ್ಲಿ ವಿವಿವಿಧ ಸಹಕಾರಿ ಯೂನಿಯನ್‌ಗಳ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಉಪ ನಿಬಂಧಕ ಪ್ರವೀಣ್ ಬಿ. ನಾಯಕ್, ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ದೇವಿ ಪ್ರಸಾದ್ ಶೆಟ್ಟಿ, ಅಶೋಕ್‌ಶೆಟ್ಟಿ, ಮಹೇಶ್ ಹೆಗ್ಡೆ, ರಾಜು ಪೂಜಾರಿ, ಜಯರಾಂ, ಸದಾಶಿವ ಉಳ್ಳಾಲ್, ಜಯರಾಜ್, ವಾದಿರಾಜ್ ಶೆಟ್ಟಿ, ಹರೀಶ್ ಆಚಾರ್ಯ ಇನ್ನಿತರರು ಉಪಸ್ಥಿತರಿದ್ದರು.

ಕೊರೋನ: ವಾಹನ ಸಾಲ ಸ್ವರೂಪದಲ್ಲಿ ಹೆಚ್ಚಳ

ಕೊರೋನ ಹಿನ್ನೆಲೆಯಲ್ಲಿ ಮಾರ್ಚ್‌ನಿಂದ ಸುಮಾರು ನಾಲ್ಕು ತಿಂಗಳ ಕಾಲ ಸಾಲ ವಸೂಲಾತಿಯಲ್ಲಿ ಹಿನ್ನೆಡೆ ಆಗಿತ್ತು. ಪ್ರಸ್ತುತ ಸಾಲ ವಸೂಲಾತಿ ನಡೆಯುತ್ತಿದ್ದು, ಠೇವಣಿಯೂ ಹೆಚ್ಚಾಗಲಿದೆ. ಕಳೆದ ವರ್ಷಕ್ಕಿಂತ ಠೇವಣಿಯಲ್ಲಿ ಶೇ. 11ರಷ್ಟು ಏರಿಕೆಯಾಗಿದೆ. ಇದೇ ವೇಳೆ ಕೊರೋನ ಹಿನ್ನೆಲೆಯಲ್ಲಿ ಈ ಬಾರಿ ವಾಹನಗಳ ಖರೀದಿಗೆ ಸಾಲ ಸ್ವರೂಪದಲ್ಲಿ ಹೆಚ್ಚಳ ಕಂಡು ಬಂದಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News