ಎನ್‌ಸಿಬಿ ವಿಚಾರಣೆಗೆ ಹಾಜರಾದ ಅರ್ಜುನ್ ರಾಮ್‌ಪಾಲ್

Update: 2020-11-13 09:36 GMT

 ಮುಂಬೈ: ಬಾಲಿವುಡ್ ನಟ ಅರ್ಜುನ್ ರಾಮ್‌ಪಾಲ್ ಅವರು ಶುಕ್ರವಾರ ಮಾದಕವಸ್ತು ನಿಯಂತ್ರಣ ದಳದ(ಎನ್‌ಸಿಬಿ)ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಈ ಹಿಂದೆ ಅರ್ಜುನ್ ರಾಮ್‌ಪಾಲ್ ಅವರಿಗೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು.

ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್‌ನಲ್ಲಿರುವ ಎನ್‌ಸಿಬಿ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ರಾಮ್‌ಪಾಲ್ ಆಗಮಿಸಿದ್ದರು.

ಬಾಲಿವುಡ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಅಧಿಕಾರಿಗಳು ಅವರನ್ನು ವಿಚಾರಿಸಿದರು ಎಂದು ಅಧಿಕಾರಿಗಳು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News