ನ.17ರಿಂದ ವಿದ್ಯಾರ್ಥಿ ನಿಲಯಗಳು ಆರಂಭ: ಸಚಿವ ಬಿ.ಶ್ರೀರಾಮುಲು

Update: 2020-11-13 10:53 GMT

ಬೆಂಗಳೂರು, ನ.13: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23ರಂದು ನಡೆದ ಸಭೆಯ ತೀರ್ಮಾನದಂತೆ, ನವೆಂಬರ್ 17 ರಿಂದ ಮೆಟ್ರಿಕ್ ನಂತರದ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ನವೆಂಬರ್ 17ರಿಂದಲೇ ಆರಂಭಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News