ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Update: 2020-11-13 17:15 GMT

ಬೆಂಗಳೂರು, ನ. 13: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2020-21 ನೆ ಸಾಲಿನಲ್ಲಿ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಂದ ಶ್ರಮಶಕ್ತಿ, ಮೈಕ್ರೋ ಸಾಲ, ವೃತ್ತಿ ಪ್ರೋತ್ಸಾಹ, ಗೂಡ್ಸ್ ಖರೀದಿ, ಮನೆ ಮಾಳಿಗೆ ಸಾಲ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 2020 ಡಿಸೆಂಬರ್ 21 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ ವಿಳಾಸ: kmdc.kar.nic.in/loan/login.aspx  ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಹಾಗೂ ಕರ್ನಾಟಕ ಅಲ್ಪಸಂಖ್ಯಾತರ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಉತ್ತರ ವಿಭಾಗ, #40, 2ನೆ ಅಡ್ಡ ರಸ್ತೆ, ಇಯರಿಂಗ್ ಕ್ಲಿನಿಕ್ ಎದುರು, ನೂರ್ ಮಸೀದಿ ಹತ್ತಿರ, 4ನೆ ಮುಖ್ಯರಸ್ತೆ, ವಸಂತಪ್ಪ ಬ್ಲಾಕ್, ಗಂಗಾನಗರ, ಬೆಂಗಳೂರು -560032 ನ್ನು ಸಂಪರ್ಕಿಸಬಹುದಾಗಿದೆ.

ಹಾಗೂ ಕೋವಿಡ್-19 ರ ವಿಶೇಷ ಯೋಜನೆಯಾದ ಮೈಕ್ರೋ ಸಾಲ ವೈಯುಕ್ತಿಕ ಯೋಜನೆ (ಮಹಿಳೆಯರಿಗೆ ಮಾತ್ರ) ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನವಾಗಿದೆ. ಇ-ಮೇಲ್ ವಿಳಾಸ: kmdcmicro.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆ, ಉತ್ತರ ವಿಭಾಗದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News