ಬಿಹಾರ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ನಿತೀಶ್ ಕುಮಾರ್

Update: 2020-11-13 17:42 GMT

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ ರಾಜ್ಯಪಾಲ ಫಗು ಚೌಹಾಣ್‌ರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು.

ಜೆಡಿ(ಯು) ಮುಖ್ಯಸ್ಥ ನಿತೀಶ್ ಸತತ ನಾಲ್ಕನೇ ಬಾರಿ ಸಿಎಂ ಪದವಿಗೆ ಮರು ಆಯ್ಕೆಯಾಗುವ ಸಾಧ್ಯತೆಯಿದ್ದು, ರಾಜ್ಯ ಅಸೆಂಬ್ಲಿಯನ್ನು ವಿಸರ್ಜಿಸಲು ತನ್ನ ಶಿಫಾರಸನ್ನು ರಾಜ್ಯಪಾಲರಿಗೆ ನೀಡಿದರು.

ರಾಜೀನಾಮೆಯನ್ನು ಸ್ವೀಕರಿಸಿದ ರಾಜ್ಯಪಾಲ ಫಗು ಚೌಹಾಣ್, ಬಿಹಾರದಲ್ಲಿ ಎನ್‌ಡಿಎ ಹೊಸ ಸರಕಾರ ರಚಿಸುವ ತನಕ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ನಿತೀಶ್ ಕುಮಾರ್‌ಗೆ ತಿಳಿಸಿದ್ದಾರೆ.

ಎನ್‌ಡಿಎ ಮೈತ್ರಿಪಕ್ಷಗಳಾದ ಬಿಜೆಪಿ, ಜೆಡಿಯು, ಎಚ್‌ಎಎಂ ಹಾಗು ವಿಐಪಿನ ನಾಯಕರು ಬಿಹಾರದ ಸಿಎಂ ಅನ್ನು ಅವರ ಅಧಿಕೃತ ನಿವಾಸದಲ್ಲಿ ಶುಕ್ರವಾರ ಬೆಳಗ್ಗೆ ಅನೌಪಚಾರಿಕವಾಗಿ ಭೇಟಿಯಾದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News