ಸಂಪುಟ ವಿಸ್ತರಣೆಯಲ್ಲಿ ಎಲ್ಲರಿಗೂ ಸಿಹಿ ಇರಲಿದೆ: ಗೃಹ ಸಚಿವ ಬೊಮ್ಮಾಯಿ

Update: 2020-11-14 11:53 GMT

ಧಾರವಾಡ, ನ.14: ರಾಜ್ಯದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಪುಟ ವಿಸ್ತರಣೆಯಲ್ಲಿ ಎಲ್ಲರಿಗೂ ಸಿಹಿ ಇರಲಿದೆ ಎಂದು ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲಿ ಯಾರಿಗೂ ಕಹಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಹೆಚ್. ವಿಶ್ವನಾಥ್ ಮುನಿಸಿನ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲ ವಿಚಾರಗಳು ಸಿಎಂ ಗಮನದಲ್ಲಿವೆ, ಸಿಎಂ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಸಚಿವ ರಮೇಶ ಜಾರಕಿಹೊಳಿ ನೇತೃತ್ವದ ಸಭೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾವುದೇ ಗುಪ್ತ ಸಭೆಗಳಿಲ್ಲ. ಎಲ್ಲ ವಿಚಾರಗಳು ಬಹಿರಂಗವಾಗಿಯೇ ಇವೆ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News