×
Ad

ಕುಂದಾಪುರ: ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Update: 2020-11-14 19:22 IST

ಕುಂದಾಪುರ, ನ.14:ನಗರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆಸಲಾದ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶನಿವಾರ ಬಹುಮಾನ ವಿತರಣೆ ನಡೆಯಿತು.

 ಮಕ್ಕಳ ದಿನಾಚರಣೆ ಪ್ರಯುಕ್ತ ಲಯನ್ಸ್ ಕ್ಲಬ್ ಮತ್ತು ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆಸಲಾದ ಕನ್ನಡ ಮತ್ತು ಇಂಗ್ಲಿಷ್ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಲಯನ್ಸ್ ಕ್ಲಬ್ ಕುಂದಾಪುರ ಇದರ ಕಾರ್ಯದರ್ಶಿ ಪ್ರೊ.ರಾಜೇಂದ್ರ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನವೀನ ಕುಮಾರ ಶೆಟ್ಟಿ ವಹಿಸಿದ್ದರು. ಲಯನ್ಸ್ ಕ್ಲಬ್ ಕುಂದಾಪುರ ಇದರ ಅಧ್ಯಕ್ಷ ಚಂದ್ರಶೇಖರ ಕಲ್ಪತರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. 

ಕುಂದಾಪುರ ಲಯನ್ಸ್ ಕ್ಲಬ್ನ ಜಿಲ್ಲಾ ಕ್ಯಾಬಿನೆಟ್ ಸದಸ್ಯ ರಾಜೀವ್ ಕೋಟ್ಯಾನ್ ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಿ.ಬಿ. ಕೃಷ್ಣಮೂರ್ತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News