ಉಡುಪಿ ಜಿಲ್ಲೆಯಲ್ಲಿ 27 ಮಂದಿಗೆ ಕೋವಿಡ್ ಸೋಂಕು

Update: 2020-11-14 14:10 GMT

ಉಡುಪಿ, ನ.14: ಜಿಲ್ಲೆಯ 27 ಮಂದಿಯಲ್ಲಿ ಶನಿವಾರ ಹೊಸದಾಗಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ದಿನದಲ್ಲಿ 45 ಮಂದಿ ಚಿಕಿತ್ಸೆಯ ಬಳಿಕ ಗುಣಮುಖರಾದರೆ, ಜಿಲ್ಲೆಯಲ್ಲಿ ಸದ್ಯ 282 ಮಂದಿ ಮಾತ್ರ ಕೊರೋನಕ್ಕೆ ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 13 ಮಂದಿ ಪುರುಷರು ಹಾಗೂ 14 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 6 ಮಂದಿ ಪುರುಷರು ಹಾಗೂ 10 ಮಂದಿ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 13, ಕುಂದಾಪುರ ತಾಲೂಕಿನ 3 ಹಾಗೂ ಕಾರ್ಕಳ ತಾಲೂಕಿನ 11 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ ಎಂದು ಡಾ.ಸೂಡ ವಿವರಿಸಿದರು.

45 ಮಂದಿ ಗುಣಮುಖ: ಶುಕ್ರವಾರ ಜಿಲ್ಲೆಯಲ್ಲಿ 45 ಮಂದಿ ಸೋಂಕಿ ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 21,887 ಆಗಿದೆ. ಜಿಲ್ಲೆಯಲ್ಲಿ ಸದ್ಯ 282 ಮಂದಿ ಸಕ್ರಿಯ ಕೋವಿಡ್ ಸೋಂಕಿತರಿದ್ದಾರೆ ಎಂದರು.

2494 ನೆಗೆಟಿವ್: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 2523 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 2494 ಮಂದಿ ನೆಗೆಟಿವ್ ಬಂದಿದ್ದಾರೆ. 29 (ಐಸಿಎಂಆರ್ ವರದಿ)ಮಂದಿ ಪಾಸಿಟಿವ್ ಬಂದಿದ್ದಾರೆ. ಹೀಗಾಗಿ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ 22,336 ಆಗಿದೆ.

ಶುಕ್ರವಾರದವರೆಗೆ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೊಳಗಾದವರ ಸಂಖ್ಯೆ ಈಗ 2,10,079 ಆಗಿದೆ. ಇವರಲ್ಲಿ 1,87,743 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. ಉಳಿದಂತೆ ಒಟ್ಟು 22,336 ಮಂದಿ ಪಾಸಿಟಿವ್ ಬಂದಿದ್ದು, ಇವರಲ್ಲಿ ಈಗಾಗಲೇ 21,887 ಮಂದಿ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 187ರಲ್ಲೇ ನಿಂತಿದೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News