ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ

Update: 2020-11-14 14:21 GMT

ಬೆಂಗಳೂರು, ನ.14: ಕೋವಿಡ್ ಹಿನ್ನೆಲೆಯಲ್ಲಿ ಸರಕಾರ ಕಳೆದ ಎಂಟು ತಿಂಗಳಿನಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ಇದೀಗ ಸರಕಾರ ಕಾಲೇಜುಗಳ ಆರಂಭಕ್ಕೆ ಅನುಮತಿ ನೀಡಿದ್ದು, ನ.17 ರಿಂದ ಕಾಲೇಜುಗಳು ಪುನರಾರಂಭಕ್ಕೆ ಸಿದ್ಧತೆ ನಡೆಯುತ್ತಿದೆ.

ಹೀಗಾಗಿ, ರಾಜ್ಯದಲ್ಲಿ ನ.17 ರಿಂದ ಪದವಿ/ಸ್ನಾತಕೋತ್ತರ/ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ರಾಜ್ಯ ಸರಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಿದ್ಯಾರ್ಥಿಗಳಿಗೆ ಕಾಲೇಜಿನ ಐಡಿ ಕಾರ್ಡ್ ಅಥವಾ ಶುಲ್ಕ ರಸೀದಿ ತೋರಿಸಿ ಉಚಿತ ಪ್ರಯಾಣ ಮಾಡಲು ಅವಕಾಶ ಮಾಡಿಕೊಟ್ಟಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾಲೇಜಿಗೆ ದಾಖಲಾಗಿರುವ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ನ.17ರಿಂದ ಬಿಎಂಟಿಸಿ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಕಾಲೇಜಿನವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News