ಖಾಸಗಿ ಶಾಲೆಗಳಿಂದ ಶುಲ್ಕ ಪಾವತಿಸಲು ಕಿರುಕುಳ ಆರೋಪ: ಪೋಷಕರ ಪ್ರತಿಭಟನೆ

Update: 2020-11-14 17:19 GMT

ಬೆಂಗಳೂರು, ನ.14: ಆನ್‍ಲೈನ್ ಶಿಕ್ಷಣದ ಹೆಸರಿನಲ್ಲಿ ಲಕ್ಷ ಲಕ್ಷ ಪೀಕುವ ಶಾಸಗಿ ಶಾಲಾ ಆಡಳಿತ ಮಂಡಳಿಗಳ ವಿರುದ್ಧ ಚೇತನ ಖಾಸಗಿ ಶಾಲೆಯ ಪೋಷಕರ ಸಂಘದಿಂದ ಫ್ರೀಡಂ ಪಾರ್ಕ್ ನಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಕೊರೋನ ಸಂಕಷ್ಟದಲ್ಲಿಯೂ ಬಹುತೇಕ ಖಾಸಗಿ ಶಾಲೆಗಳು ಆನ್‍ಲೈನ್ ಶಿಕ್ಷಣದ ಹೆಸರಿನಲ್ಲಿ ಈಗಾಗಲೇ ವಸೂಲಿಗೆ ಇಳಿದಿವೆ. ಎಲ್ಲಾ ಪೋಷಕರಿಗೆ ವಾಟ್ಸ್ ಆ್ಯಪ್, ಇ-ಮೇಲ್ ಮೂಲಕ ಎರಡನೇ ಹಂತದ ಶುಲ್ಕ ಕಟ್ಟಿ ಎಂದು ಒತ್ತಡ ಹಾಕಲಾಗುತ್ತಿದೆ. ಹೀಗಾಗಿ ಆಕ್ರೋಶಗೊಂಡ ನೂರಾರು ಪೋಷಕರು ಖಾಸಗಿ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿದರು.

ರಾಜ್ಯ ಸರಕಾರ ಕೂಡಲೇ ಖಾಸಗಿ ಶಾಲಾ ಶುಲ್ಕ ನಿಗದಿ ಮಾಡಬೇಕು. ರಾಜ್ಯದಲ್ಲಿ ಶಾಲಾ ಶುಲ್ಕದ ಹೆಸರಿನಲ್ಲಿ ನಡೆಯುತ್ತಿರುವ ದಂಧೆ ನಿಲ್ಲಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರಕಾರ ಖಾಸಗಿ ಶಾಲಾ ಆಡಳಿತ ಮಂಡಳಿಗೆ ಕಡಿವಾಣ ಹಾಕಿಲ್ಲ ಅಂದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News