ಮಾರಕಾಸ್ತ್ರಗಳಿಂದ ಬೆದರಿಸಿ ವಸೂಲಿ ಆರೋಪ: ಮೂವರ ಬಂಧನ
Update: 2020-11-14 22:52 IST
ಬೆಂಗಳೂರು, ನ.14: ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾರಕಾಸ್ತ್ರಗಳಿಂದ ಬೆದರಿಸಿ ವಸೂಲಿ ಮಾಡುತ್ತಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಬಾಣಸವಾಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಗರದ ವಿಷ್ಣು, ಶಿವಕುಮಾರ್, ಸಂತಮಿಲ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರಿಂದ 2.5 ಲಕ್ಷ ಬೆಲೆ ಬಾಳುವ 4 ದ್ವಿಚಕ್ರ ವಾಹನಗಳು, 40 ಮೊಬೈಲ್‍ಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.