ಡಾ.ಎಂ.ಎನ್.ರಾಜೇಂದ್ರ ಕುಮಾರ್‌ರಿಗೆ ನಳಿನ್‌ರಿಂದ ಬಿಜೆಪಿಗೆ ಆಹ್ವಾನ
Update: 2020-11-15 15:41 IST
ಮಂಗಳೂರು, ನ.15: ರಾಜ್ಯ ಸಹಕಾರ ಮಹಾಮಂಡಲ ಮತ್ತು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪಕ್ಷ ಸೇರುವಂತೆ ಪರೋಕ್ಷ ಆಹ್ವಾನ ನೀಡಿದ್ದಾರೆ.
ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ನಡೆದ ರವಿವಾರ ರಾಜ್ಯ ಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭದಲ್ಲಿ ನಳಿನ್ ಈ ಆಹ್ವಾನ ನೀಡಿದರು.
‘‘ರಾಜೇಂದ್ರ ಕುಮಾರ್ ಕೇಂದ್ರ ಸರಕಾರದ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದ್ದಾರೆ. ಅವರು ರಾಷ್ಟ್ರ ಮಟ್ಟದ ನಾಯಕ ಆಗಬೇಕು ಎನ್ನುವುದು ನಮ್ಮೆಲ್ಲರ ಆಸೆ. ಇದು ಬಹಿರಂಗವಾಗಿ ಚರ್ಚಿಸುವ ವಿಚಾರ ಅಲ್ಲ. ಈ ಬಗ್ಗೆೆ ನಾನು ಅವರ ಬಳಿ ವೈಯಕ್ತಿಕವಾಗಿ ಮಾತನಾಡುತ್ತೇನೆ’’ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.