ಭಗ್ನ ಪ್ರೇಮಿಯಿಂದ ಯುವತಿಗೆ ಚೂರಿ ಇರಿತ
Update: 2020-11-15 15:44 IST
ಮೈಸೂರು, ನ.15: ಪ್ರೀತಿ ನಿರಾಕರಿಸಿದ್ದಕ್ಕೆ ಕುಪಿತಗೊಂಡ ಯುವಕ ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕುವಿನಿಂದ ಇರಿದ ಘಟನೆ ರವಿವಾರ ಬೆಳಗ್ಗೆ ನಗರದ ಕೆ.ಆರ್.ಮೊಹಲ್ಲಾದ ದಿವಾನ್ಸ್ ರಸ್ತೆಯಲ್ಲಿ ನಡೆದಿದೆ.
ಅಶ್ವಿನಿ (19) ಚಾಕು ಇರಿತಕ್ಕೆ ಒಳಗಾದ ಯುವತಿ. ಗಗನ್ ಕೃತ್ಯ ಎಸಗಿದ ಆರೋಪಿ. ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಆರೋಪಿ ಪರಾರಿಯಾಗಿದ್ದಾನೆ.
ಈ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.