ಉಡುಪಿ ಜಿಲ್ಲೆಯಲ್ಲಿ 14 ಮಂದಿಗೆ ಕೋವಿಡ್ ಪಾಸಿಟಿವ್

Update: 2020-11-15 13:24 GMT

ಉಡುಪಿ, ನ.15: ಜಿಲ್ಲೆಯಲ್ಲಿ ರವಿವಾರ ಕೇವಲ 14 ಮಂದಿಯಲ್ಲಿ ಕೋವಿಡ್‌ಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಕಳೆದ ಜುಲೈ ತಿಂಗಳ ಬಳಿಕ ದಿನವೊಂದರಲ್ಲಿ ಕಾಣಿಸಿಕೊಂಡ ಕನಿಷ್ಠ ಪಾಸಿಟಿವ್ ಸಂಖ್ಯೆ ಇದಾಗಿದೆ. ದಿನದಲ್ಲಿ 56 ಮಂದಿ ಚಿಕಿತ್ಸೆಯ ಬಳಿಕ ಗುಣಮುಖರಾದರೆ, ಸದ್ಯ ಜಿಲ್ಲೆಯಲ್ಲಿ 240 ಮಂದಿ ಮಾತ್ರ ಕೊರೋನಕ್ಕೆ ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 9 ಮಂದಿ ಪುರುಷರು ಹಾಗೂ 5 ಮಂದಿ ಮಹಿಳೆಯರು. ಇವರಲ್ಲಿ ತಲಾ ಐವರು ಪುರುಷರು ಹಾಗೂ ಮಹಿಳೆಯ ರಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 11, ಕುಂದಾಪುರ ತಾಲೂಕಿನ ಇಬ್ಬರು ಹಾಗೂ ಕಾರ್ಕಳ ತಾಲೂಕಿನ ಒಬ್ಬರು ಪಾಸಿಟಿವ್ ಕಂಡುಬಂದಿದೆ ಎಂದು ಡಾ.ಸೂಡ ವಿವರಿಸಿದರು.

56 ಮಂದಿ ಗುಣಮುಖ: ಶನಿವಾರ ಜಿಲ್ಲೆಯಲ್ಲಿ 56 ಮಂದಿ ಸೋಂಕಿ ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 21,943 ಆಗಿದೆ. ಜಿಲ್ಲೆಯಲ್ಲಿ ಸದ್ಯ 240 ಮಂದಿ ಸಕ್ರಿಯ ಕೋವಿಡ್ ಸೋಂಕಿತರಿದ್ದಾರೆ ಎಂದರು.

2109 ನೆಗೆಟಿವ್: ಜಿಲ್ಲೆಯಲ್ಲಿ ಶನಿವಾರ ಒಟ್ಟು 2125 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 2109 ಮಂದಿ ನೆಗೆಟಿವ್ ಬಂದಿದ್ದಾರೆ. 16 (ಐಸಿಎಂಆರ್ ವರದಿ)ಮಂದಿ ಪಾಸಿಟಿವ್ ಬಂದಿದ್ದಾರೆ. ಹೀಗಾಗಿ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ 22,352 ಆಗಿದೆ.

ಶುಕ್ರವಾರದವರೆಗೆ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೊಳಗಾದವರ ಸಂಖ್ಯೆ 2,12,204 ಆಗಿದೆ. ಇವರಲ್ಲಿ 1,89,854 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. ಉಳಿದಂತೆ ಒಟ್ಟು 22,352 ಮಂದಿ ಪಾಸಿಟಿವ್ ಬಂದಿದ್ದು, ಇವರಲ್ಲಿ ಈಗಾಗಲೇ 21,943 ಮಂದಿ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ. ಹೀಗಾಗಿ ನ.7ರಿಂದ ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 187ರಲ್ಲೇ ನಿಂತಿದೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News