ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಉಸ್ತುವಾರಿಯಾಗಿ ಸಚಿವ ಡಾ.ಸುಧಾಕರ್

Update: 2020-11-15 14:21 GMT

ಬೆಂಗಳೂರು, ನ. 15: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿಯೊಂದನ್ನು ನೀಡಿದ್ದು, ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್‍ಎಂಸಿ) ಚುನಾವಣೆಯ ಬಿಜೆಪಿ ಉಸ್ತುವಾರಿಯನ್ನಾಗಿ ನೇಮಿಸಿದೆ.

ಈ ಸಂಬಂಧ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದ್ದಾರೆ. ಸಂಸದ ಭೂಪೇಂದ್ರ ಯಾದವ್ ಅವರನ್ನು ಚುನಾವಣೆ ಪ್ರಧಾನ ಉಸ್ತುವಾರಿಯನ್ನಾಗಿ ಬಿಜೆಪಿ ನೇಮಕ ಮಾಡಿದ್ದು, ಸಚಿವ ಡಾ.ಕೆ.ಸುಧಾಕರ್, ಮಹಾರಾಷ್ಟ್ರ ಶಾಸಕ ಆಶೀಶ್, ಗುಜರಾತ್ ಬಿಜೆಪಿ ನಾಯಕ ಪ್ರದೀಪ್ ಸಿಂಗ್ ವಾಘೇಲಾ ಹಾಗೂ ಸತೀಶ್ ರೆಡ್ಡಿ ಅವರು ಸಹ ಉಸ್ತುವಾರಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಬಿಜೆಪಿ ಹೈಕಮಾಂಡ್‍ನ ಈ ತೀರ್ಮಾನಕ್ಕೆ ಸಚಿವ ಡಾ.ಕೆ.ಸುಧಾಕರ್ ಟ್ವಿಟರ್ ಮೂಲಕ ಸಂತಸ ವ್ಯಕ್ತಪಡಿಸಿದ್ದು, ನನಗೆ ನೀಡಿರುವ ಜವಾಬ್ದಾರಿಯನ್ನು ನಿರ್ವಹಿಸಲು ಶ್ರಮ ವಹಿಸಿ ಕಾರ್ಯ ನಿರ್ವಹಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News