×
Ad

ಕೊರೋನದಿಂದ ಶಾಸಕ ಬಂಡೆಪ್ಪ ಖಾಶೆಂಪುರ್ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

Update: 2020-11-15 20:18 IST

ಬೀದರ್, ನ. 15: ಕೊರೋನ ಸೋಂಕು ತಗುಲಿದ ಹಿನ್ನೆಲೆಯಲ್ಲಿ ನ.5ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ರವಿವಾರ ಕೊರೋನದಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಕೆಲದಿನಗಳು ಹೋಂ ಕ್ವಾರೆಂಟೈನ್‍ನಲ್ಲಿ ಇರುವಂತೆ ವೈದರು ಸಲಹೆ ನೀಡಿದ್ದು, ಅವರು ಬೆಂಗಳೂರಿನ ತಮ್ಮ ನಿವಾಸದಲ್ಲೇ ವಿಶ್ರಾಂತಿ ಪಡೆಯಲಿದ್ದು, ಬಳಿಕ ತಮ್ಮ ಕ್ಷೇತ್ರಕ್ಕೆ ತೆರಳಲಿದ್ದಾರೆ. ಗುಣಮುಖರಾಗಿ ಬರಲಿ ಎಂದು ಹಾರೈಸಿದ, ನನ್ನ ಕ್ಷೇತ್ರದ ಜನತೆಗೆ ಹಾಗೂ ನನ್ನ ಅಭಿಮಾನಿಗಳಿಗೆ ಮೊದಲು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಿಮ್ಮ ಪ್ರಾರ್ಥನೆಯಿಂದಾಗಿ ನಾನು ಕೊರೋನ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ ಎಂದು ತಿಳಿಸಿದ್ದಾರೆ.

ನಾನು ಈ ಹಿಂದಿನಂತೆಯೇ ಬಡವರ ಪರವಾಗಿ, ಶ್ರಮಿಕರ ಪರವಾಗಿ, ಕ್ಷೇತ್ರದ ಜನರ ಪರವಾಗಿ ದುಡಿಯುತ್ತೇನೆ. ಆದರೆ ಕೆಲ ದಿನಗಳ ಕಾಲ ಹೋಂ ಕ್ವಾರೆಂಟೈನ್ ನಲ್ಲಿ ಇರುವಂತೆ ವೈದ್ಯರು ತಿಳಿಸಿದ್ದಾರೆ. ಹೋಂ ಕ್ವಾರೆಂಟೈನ್ ಬಳಿಕ ಮತ್ತೆ ನಿಮ್ಮ ಸೇವೆಯಲ್ಲಿ ನಾನು ತೊಡಗಿಕೊಳ್ಳುತ್ತೇನೆ ಸರ್ವರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News