ಕಲ್ಲಡ್ಕ : ಮರ್ಹೂಂ ಉಮ್ಮರ್ ಫಾರೂಕ್ ಸ್ಮರಣಾರ್ಥ ರಕ್ತದಾನ ಶಿಬಿರ

Update: 2020-11-15 15:49 GMT

ಬಿ.ಸಿ.ರೋಡ್ : ಮರ್ಹೂಮ್ ಉಮ್ಮರ್ ಫಾರೂಕ್ ಕಲ್ಲಡ್ಕ ರವರ ಸ್ಮರಣಾರ್ಥ ಝಮಾನ್ ಬಾಯ್ಸ್ ಕಲ್ಲಡ್ಕ, ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಇಂಡಿಯನ್ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಇವುಗಳ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವು ಶನಿವಾರ ಕಲ್ಲಡ್ಕದ ಸರಕಾರಿ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಲ್ಲಡ್ಕ ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಶೇಖ್ ಮುಹಮ್ಮದ್ ಇರ್ಫಾನಿ ಮಾತನಾಡಿ ಯುವ ಜನಾಂಗಕ್ಕೆ ಸೂಕ್ತ ಮಾರ್ಗದರ್ಶನ ನೀಡಿ ಅವರನ್ನು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಿದ್ದೀಕ್ ಪನಾಮ ಮಾತನಾಡಿ ಯುವ ಜನತೆ ಮಾದಕ ವಸ್ತುಗಳಿಗೆ ಬಲಿಯಾಗದಂತೆ ನೋಡಿಕೊಳ್ಳು ವುದು ಮತ್ತು ಮಾದಕ ವಸ್ತುಗಳ ನಿರ್ಮೂಲನೆಗಾಗಿ ನಾವು ವಿಶೇಷ ಮುತುವರ್ಜಿ ವಹಿಸಬೇಕಾಗಿದೆ ಎಂದರು.

ಕಲ್ಲಡ್ಕ ಝಮಾನ್ ಬಾಯ್ಸ್ ಅದ್ಯಕ್ಷ ಮುನಾಝ್ ಅದ್ಯಕ್ಷತೆ ವಹಿಸಿದ್ದರು. ಫಾರೂಕ್ ನ ಸಹೋದರ ತೌಫೀಕ್ ಕಲ್ಲಡ್ಕ, ರಕ್ತದಾನಿ ಹಕೀಂ ಇಸ್ಮಾಯಿಲ್ ನಗರ, ಫಲುಲ್ ಕಲ್ಲಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಪ್ರಮುಖರಾದ ಕೆ.ಕೆ.ಹಾರಿಸ್ ಕಲ್ಲಡ್ಕ, ಶಾಫಿ ಕಲ್ಲಡ್ಕ, ಸತ್ತಾರ್ ಕಲ್ಲಡ್ಕ, ಯಾಸಿರ್ ವೆಲ್ಕಂ, ಇಮ್ರಾನ್ ನಂದಾವರ, ಅಕ್ರಂ ಸಜಿಪ, ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಬಿರದಲ್ಲಿ 205 ಯುನಿಟ್ ರಕ್ತ ಸಂಗ್ರಹಿಸಲಾಯಿತು.

ಬ್ಲಡ್ ಡೋನರ್ಸ್ ಅದ್ಯಕ್ಷ ಸಿದ್ದೀಕ್ ಮಂಜೇಶ್ವರ ಸ್ವಾಗತಿಸಿ, ನಿರ್ವಾಹಕ ಫಾರೂಕ್ ಬಿಗ್ ಗ್ಯಾರೇಜ್ ವಂದಿಸಿದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News