ಬೆಟ್ಟಿಂಗ್ ದಂಧೆ ಬಗ್ಗೆ ಗೃಹ ಇಲಾಖೆ ಹೊರತುಪಡಿಸಿ ಉಳಿದವರೆಲ್ಲರಿಗೂ ಗೊತ್ತು: ಶಾಸಕ ಪ್ರಿಯಾಂಕ್ ಖರ್ಗೆ

Update: 2020-11-15 16:31 GMT
Photo: Facebook

ಕಲಬುರಗಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಐಪಿಲ್ ಬೆಟ್ಟಿಂಗ್ ಕುರಿತು ಗೃಹ ಇಲಾಖೆಯನ್ನು ಹೊರತುಪಡಿಸಿ ಉಳಿದವರೆಲ್ಲರಿಗೂ ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಜಿಲ್ಲೆಯಲ್ಲಿ ನಡೆದಿದೆ ಎನ್ನಲಾದ ಐಪಿಲ್ ಬೆಟ್ಟಿಂಗ್ ಹಾಗೂ ಇತ್ತೀಚಿಗೆ ಸೋಲಾಪುರ ಪೊಲೀಸರ ದಾಳಿ ಕುರಿತು ಟ್ವಿಟರ್ ಖಾತೆಯಲ್ಲಿ ಅವರು ಪ್ರತಿಕ್ರಿಯಿಸಿದ್ದಾರೆ.

ಜಿಲ್ಲೆಯಲ್ಲಿ ಇಷ್ಟೆಲ್ಲ ನಡೆದಿದ್ದರೂ ಕೂಡಾ ಗೃಹ ಸಚಿವರಿಂದ ಈ ವಿಷಯದ ಕುರಿತು ಒಂದೇ ಒಂದು ಪ್ರತಿಕ್ರಿಯೆ ಇಲ್ಲ. ಗೃಹ ಇಲಾಖೆಗೆ ಈ ಕುರಿತು ಸುಳಿವು ಇರಲಿಕ್ಕಿಲ್ಲ ಅಥವಾ ಸ್ಥಳೀಯ ಆಡಳಿತ ಈ ಬಗ್ಗೆ ಮಾಹಿತಿ ನೀಡಿರಲಿಕ್ಕಿಲ್ಲ. ಯಾಕೆಂದರೆ ಅವರೂ ಕೂಡಾ ಭಾಗಿಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News