×
Ad

ಕಂದಾವರ : ಉದ್ಯಮಿಯ‌ ಮೇಲೆ ತಲವಾರು ದಾಳಿ

Update: 2020-11-16 09:04 IST

ಮಂಗಳೂರು: ನ.16: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಬಳಿ‌ ರವಿವಾರ ರಾತ್ರಿ‌ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದ ಬಗ್ಗೆ ವರದಿಯಾಗಿದೆ.

ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56)ದಾಳಿಗೊಳಗಾದ ಉದ್ಯಮಿ.

ಅವರು ರಾತ್ರಿ ಸುಮಾರು 10:30ಕ್ಕೆ ಮಸೀದಿಯಲ್ಲಿ ನಮಾಝ್ ಮಾಡಿ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ವೈಯಕ್ತಿಕ ದ್ವೇಷದಿಂದ ಈ ಕೃತ್ಯ ನಡೆದಿರುವ ಬಗ್ಗೆ ಶಂಕಿಸಲಾಗಿದೆ. ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ವೆನ್ಝ್ ಬಟ್ಟೆಬರೆ ಅಂಗಡಿ ಹೊಂದಿರುವ ಅಝೀಝ್ ಕಂದಾವರ ಮಸೀದಿಯ ಆಡಳಿತ ಕಮಿಟಿಯಲ್ಲೂ ಸಕ್ರಿಯರಾಗಿದ್ದರು. ಪ್ರಕರಣ ದಾಖಲಿಸಿರುವ ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News