×
Ad

ಬೆಂಗಳೂರು : ಕಲ್ಲಿನಿಂದ ಜಜ್ಜಿ ಯುವಕನ ಕೊಲೆ

Update: 2020-11-16 11:12 IST

ಬೆಂಗಳೂರು, ನ.16: ಕಲ್ಲಿನಿಂದ ಜಜ್ಜಿ ಯುವಕನೋರ್ವನನ್ನು ಕೊಲೆ ಮಾಡಿದ ಘಟನೆ ನಿಡಗುಂದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಿಡಗುಂದಿಯ ತಿಪ್ಪಣ್ಣ ಗೊಂದಳಿ (36) ಕೊಲೆಯಾದ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.

ರವಿವಾರ ರಾತ್ರಿ ಸ್ನೇಹಿತರೊಂದಿಗೆ ಇಸ್ಪೀಟ್ ಆಟದಲ್ಲಿ ತಿಪ್ಪಣ್ಣ ಹಣ ಗೆದ್ದಿದ್ದು, ಈ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿದಾಗ ತಿಪ್ಪಣ್ಣನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಜೊತೆಯಲ್ಲಿದ್ದವರು ಪರಾರಿಯಾಗಿದ್ದಾರೆ ಎಂದು ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News