ಸಿದ್ದೀಕ್ ಕಪ್ಪನ್ ಬಂಧನ: ಉತ್ತರ ಪ್ರದೇಶ ಸರಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

Update: 2020-11-16 10:27 GMT

ಹೊಸದಿಲ್ಲಿ: ಉತ್ತರ ಪ್ರದೇಶ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಕೇರಳದ ಪತ್ರಕರ್ತ ಸಿದ್ದೀಕ್ ಕಪ್ಪನ್ ರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನವೆಂಬರ್ 20ರಂದು ಶುಕ್ರವಾರ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದಿರುವ ಕೋರ್ಟ್, ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ಕೋರಿ ಉತ್ತರ ಪ್ರದೇಶ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಕೇರಳ ಕಾರ್ಯನಿರತ ಪತ್ರಕರ್ತರ ಸಂಘ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಎಸ್.ಎ. ಬೊಬ್ಡೆಯವರ ನೇತೃತ್ವದ ಪೀಠ, ಜಾಮೀನಿಗಾಗಿ ಅರ್ಜಿದಾರರು ಅಲಹಾಬಾದ್ ಹೈಕೋರ್ಟನ್ನು ಯಾಕೆ ಸಂಪರ್ಕಿಸಿಲ್ಲ ಎಂದು ಪ್ರಶ್ನಿಸಿತು.

“ನನಗೆ ಅವರನ್ನು ಭೇಟಿಯಾಗಲು ಕೂಡ ಸಾಧ್ಯವಾಗುತ್ತಿಲ್ಲ. ನಾನು ಹೈಕೋರ್ಟ್ ಗೆ ಹೋಗುವುದು ಹೇಗೆ” ಎಂದು ಕಪ್ಪನ್ ಪರ ವಕೀಲ ಕಪಿಲ್ ಸಿಬಲ್ ಹೇಳಿದರು.

“ಎಫ್ ಐಆರ್ ನಲ್ಲಿ ಸಿದ್ದೀಕ್ ಕಪ್ಪನ್ ಹೆಸರಿಲ್ಲ. ಯಾವುದೇ ಅಪರಾಧಗಳ ಆರೋಪವಿಲ್ಲ. ಅಕ್ಟೋಬರ್ 5ರಿಂದ ಜೈಲಿನಲ್ಲಿದ್ದಾರೆ” ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News