×
Ad

ಡಿಜೆ-ಕೆಜಿ ಹಳ್ಳಿ ಪ್ರಕರಣ: ಸಂಪತ್ ರಾಜ್ ಗೆ ಆಶ್ರಯ ಆರೋಪದಡಿ ಓರ್ವ ಸೆರೆ

Update: 2020-11-16 16:32 IST

ಬೆಂಗಳೂರು, ನ.16: ಡಿಜೆ‌-ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಹಾಗೂ ಝಾಕಿರ್ ಗೆ ಆಶ್ರಯ ನೀಡಿದ್ದ ಆರೋಪದಡಿ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಿಯಾಝುದ್ದೀನ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಸಂಪತ್ ರಾಜ್ ಹಾಗೂ ಝಾಕಿರ್ ಪಾತ್ರವಿರುವುದು ಅತ್ಯಂತ ಸ್ಪಷ್ಟವಾಗಿದೆ. ಆರೋಪಿಗಳ ಬಂಧನಕ್ಕೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದ್ದೇವೆ, ವಿಶೇಷ ತಂಡ ರಚಿಸಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದೇವೆ ಎಂದರು.

ಆರೋಪಿಗಳು ತಲೆಮರೆಸಿಕೊಳ್ಳಲು ನೆರವು ಹಾಗೂ ಆಶ್ರಯ ನೀಡಲು ಸಹಕರಿಸಿದ್ದ ರಿಯಾಝಾದ್ದೀನ್ ನನ್ನು ಈಗಾಗಲೇ ಬಂಧಿಸಲಾಗಿದೆ‌‌. ಈತ ನೀಡಿದ ಸುಳಿವು ಆಧರಿಸಿ ತಪ್ಪಿತಸ್ಥರನ್ನು ಶೀಘ್ರದಲ್ಲೇ ದಸ್ತಗಿರಿ ಮಾಡಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News