ತಾಯಿಯನ್ನು ಅತ್ಯಾಚಾರಗೈದು, ಕೊಲೆಗೈದ ಪುತ್ರ

Update: 2020-11-16 11:40 GMT

ಹಾವೇರಿ: ತನ್ನ ತಾಯಿಯ ಮೇಲೆಯೇ ಅತ್ಯಾಚಾರಗೈದು ಆಕೆಯನ್ನು ಕೊಲೆಗೈದ ಆರೋಪದ ಮೇಲೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪೊಲೀಸರು 21 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಶಿವಪ್ಪ ಎಂದು ಗುರುತಿಸಲಾಗಿದೆ.

ಆರೋಪಿ ಶಿವಪ್ಪನ ತಂದೆ ಒಂದು ವರ್ಷದ ಹಿಂದೆ ತೀರಿಕೊಂಡ ನಂತರ ತಾಯಿಗೆ ಬೇರೆ ಪುರುಷರೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಶಿವಪ್ಪನಿಗೆ ಇಷ್ಟವಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಈ ಕುರಿತಂತೆ ಆತ ತಾಯಿಯ ಜತೆಗೂ ಹೇಳಿಕೊಂಡಿದ್ದನೆನ್ನಲಾಗಿದೆ. ಇದೇ ವಿಚಾರದಲ್ಲಿ ಶಿವಪ್ಪ ಆಕೆಯನ್ನು ಹತ್ಯೆಗೈದಿದ್ದಾನೆ. ವಿಚಾರಣೆ ವೇಳೆ ಆತ ತಾನು ಮಾಡಿದ ಅಪರಾಧವನ್ನು ಒಪ್ಪಿಕೊಂಡಿದ್ದಾನೆಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News