ಸೋತವರಿಗೆ ಸಚಿವ ಸ್ಥಾನ ನೀಡುವುದಾದರೆ ಜನ ನಮ್ಮನ್ನೇಕೆ ಆಯ್ಕೆ ಮಾಡಬೇಕು: ರೇಣುಕಾಚಾರ್ಯ ಪ್ರಶ್ನೆ

Update: 2020-11-16 12:38 GMT

ದಾವಣಗೆರೆ, ನ.16: ಸೋತವರಿಗೆ ಸಚಿವ ಸ್ಥಾನ ನೀಡುವುದಾದರೆ ಜನರು ನಮ್ಮನ್ನು ಏಕೆ ಆಯ್ಕೆ ಮಾಡಬೇಕೆಂದು ಬಿಜೆಪಿ‌ ಶಾಸಕ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಂದ ಆಯ್ಕೆಯಾದವರಿಗೆ ಸಚಿವ ಸ್ಥಾನ ನೀಡಬೇಕೆನ್ನುವುದು ನನ್ನ ಅಭಿಪ್ರಾಯವಾಗಿದ್ದು, ಇದಕ್ಕೆ ನಾನು ಬದ್ಧ ಎಂದು ಹೇಳಿದರು.

ನಮ್ಮ ಜಿಲ್ಲೆಗೆ ಸಚಿವ ಸ್ಥಾನವನ್ನು ನೀಡಬೇಕು. ಜತೆಗೆ ಪ್ರಾದೇಶಿಕ ಸಮತೋಲನ ಆಧಾರದಲ್ಲಿ ಸ್ಥಾನ ನೀಡಬೇಕೆಂದು ಈಗಾಗಲೇ ಜಿಲ್ಲೆಯ ಶಾಸಕರು ಸಭೆ ಮಾಡಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದೇವೆ. ಆದರೆ, ಯಡಿಯೂರಪ್ಪ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದ ಅವರು, ಹಾದಿ- ಬೀದಿ ರಂಪ ಮಾಡೋದು ನಮಗೆ ಇಷ್ಟ ಇಲ್ಲ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News