ಶಾಹೀನ್‌ಬಾಗ್ ಕುರಿತು ಸುಪ್ರೀಂಕೋರ್ಟ್ ತೀರ್ಪು ವಿರುದ್ಧ ಮೇಲ್ಮನವಿ

Update: 2020-11-17 09:41 GMT

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕಾರ್ಯಕರ್ತರ ಗುಂಪು ಹೊಸದಿಲ್ಲಿಯಲ್ಲಿ ಶಾಹೀನ್ ಬಾಗ್‌ನಲ್ಲಿ ನಡೆದಿರುವ ಪ್ರತಿಭಟನೆಗೆ ಸಂಬಂಧಿಸಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ವಿರುದ್ದ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಗೊತ್ತುಪಡಿಸಿರುವ ಸ್ಥಳದಲ್ಲಿ ಪ್ರತಿಭಟನೆ ನಡೆಸಬೇಕೆಂದು ಇತ್ತೀಚೆಗೆ ಶಾಹೀನ್ ಬಾಗ್ ಪ್ರತಿಭಟನೆಗೆ ಸಂಬಂಧಿಸಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು.

ಶಾಹೀನ್‌ಬಾಗ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕಾನಿಝ್ ಫಾತಿಮಾ ಹಾಗೂ ಇತರ 11 ಮಂದಿ ದಿಲ್ಲಿ ನಿವಾಸಿಗಳು ಮೇಲ್ಮನವಿ ಸಲ್ಲಿಸಿದ್ದಾರೆ. ಈ ಹಿಂದೆ ತೀರ್ಪುನೀಡಿರುವ ನ್ಯಾಯಪೀಠವೇ ಮೇಲ್ಮನವಿಯ ವಿಚಾರಣೆಯನ್ನು ನಡೆಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News