ರಾಜ್ಯಸಭೆ ಉಪಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಬಿಜೆಪಿ

Update: 2020-11-17 11:37 GMT
ಡಾ.ಕೆ. ನಾರಾಯಣ

ಬೆಂಗಳೂರು, ನ.17: ಅಶೋಕ್‌ ಗಸ್ತಿ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿ.1 ರಂದು ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ನಾರಾಯಣ ಅವರಿಗೆ ಟಿಕೆಟ್ ನೀಡಲಾಗಿದೆ.

ದೇವಾಂಗ(ನೇಕಾರ) ಸಮಾಜದ ನಾರಾಯಣ್, ಕಳೆದ ಕೆಲ ದಶಕಗಳಿಂದ ಬಿಜೆಪಿಯಲ್ಲಿ ಕಾರ್ಯಕರ್ತರಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. 

ರಾಜ್ಯಸಭೆ ಉಪಚುನಾವಣೆಗೆ ನವೆಂಬರ್‌ 18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ನ.19 ರಂದು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ನ.23 ಕೊನೆಯ ದಿನವಾಗಿದೆ.

ರಾಜ್ಯಸಭಾ ಸದಸ್ಯರಾಗಿದ್ದ ಅಶೋಕ್ ಗಸ್ತಿ ಕೊರೋನ ಖಾಯಿಲೆಗೆ ಗುರಿಯಾಗಿ ನಿಧನ ಹೊಂದಿದ್ದರು. ಅವರಿಂದ ತೆರವಾಗಿದ್ದ ಜಾಗಕ್ಕೆ ಬಿಜೆಪಿ ವರಿಷ್ಠರು ನಾರಾಯಣ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ. ನಾರಾಯಣ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News