ದ.ಕ.ಜಿಲ್ಲೆ : 30 ಮಂದಿಗೆ ಕೊರೋನ ಪಾಸಿಟಿವ್

Update: 2020-11-17 14:23 GMT

ಮಂಗಳೂರು, ನ.17: ದ.ಕ.ಜಿಲ್ಲೆಯಲ್ಲಿ ಮಂಗಳವಾರ 30 ಮಂದಿಗೆ ಕೊರೋನ ಪಾಸಿಟಿವ್ ಆಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಈವರೆಗೆ 3,04,173 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ. ಆ ಪೈಕಿ 2,72,834 ಮಂದಿಯ ವರದಿ ನೆಗೆಟಿವ್ ಮತ್ತು 31,339 ಮಂದಿಯ ವರದಿ ಪಾಸಿಟಿವ್ ಬಂದಿದೆ. ಅಲ್ಲದೆ ಮಂಗಳವಾರ 91 ಮಂದಿ ಗುಣಮುಖರಾಗಿದ್ದಾರೆ.

ಒಟ್ಟಾರೆ ಈವರೆಗೆ ಗುಣಮುಖರಾದವರ ಸಂಖ್ಯೆ 29,962ಕ್ಕೇರಿದೆ. ಅಲ್ಲದೆ ಮೃತಪಟ್ಟವರ ಸಂಖ್ಯೆ 696ಕ್ಕೇರಿದೆ. ಮಂಗಳವಾರದವರೆಗೆ ಜಿಲ್ಲೆಯಲ್ಲಿ 681 ಸಕ್ರಿಯ ಪ್ರಕರಣಗಳಿವೆ.

ಮಾಸ್ಕ್ ಧರಿಸದೆ ಕೋವಿಡ್ -19 ನಿಯಮ ಉಲ್ಲಂಘಿಸಿದ ಘಟನೆಗೆ ಸಂಬಂಧಿಸಿ ಈವರೆಗೆ 13,245 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ 14,34,717 ರೂ.ವನ್ನು ಸಂಗ್ರಹಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News