ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾಕ್ಕೆ ಪದ್ಮಶ್ರೀ ಪುರಸ್ಕೃತ ಪತ್ರಕರ್ತೆ ಪ್ಯಾಟ್ರಿಷಿಯಾ ಮುಖಿಮ್ ರಾಜೀನಾಮೆ
ಶಿಲ್ಲಾಂಗ್ (ಮೇಘಾಲಯ), ನ. 17: ತನ್ನ ಫೇಸ್‌ಬುಕ್ ಪೋಸ್ಟ್ ವಿರುದ್ಧ ಮೇಘಾಲಯ ಉಚ್ಚ ನ್ಯಾಯಾಲಯ ಇತ್ತೀಚೆಗೆ ನೀಡಿದ ತೀರ್ಪಿಗೆ ಸಂಬಂಧಿಸಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮೌನ ವಹಿಸಿದೆ ಎಂದು ಆರೋಪಿಸಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಗೂ ‘ಶಿಲ್ಲಾಂಗ್ ಟೈಮ್ಸ್’ ಸಂಪಾದಕಿ ಪ್ಯಾಟ್ರಿಷಿಯಾ ಮುಖಿಮ್ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾಕ್ಕೆ ರಾಜೀನಾಮೆ ನೀಡಿದ್ದಾರೆ.
ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಅಧ್ಯಕ್ಷೆ ಸೀಮಾ ಮುಸ್ತಾಫಾ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ, ಉಚ್ಚ ನ್ಯಾಯಾಲಯದ ಆದೇಶದ ಬಗ್ಗೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮೌನವಾಗಿದೆ. ಆದರೆ, ಆತ್ಮಹತ್ಯೆಗೆ ಉತ್ತೇಜನ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ರಿಪಬ್ಲಿಕ್ ಟಿ.ವಿ.ಯ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಬಗ್ಗೆ ತೀವ್ರ ಉತ್ಸಾಹದಿಂದ ಪ್ರತಿಕ್ರಿಯಿಸಿದೆ ಹಾಗೂ ಅವರನ್ನು ಬೆಂಬಲಿಸಿ ಹೇಳಿಕೆ ಬಿಡುಗಡೆ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.
ಜುಲೈನ ಫೇಸ್‌ಬುಕ್ ಪೋಸ್ಟ್ ವಿರುದ್ಧ ಪೊಲೀಸರು ದೂರು ದಾಖಲಿಸಿದ ಕುರಿತಂತೆ ಕ್ರಮ ಕೈಗೊಳ್ಳಲು ಮೇಘಾಲಯ ಉಚ್ಚ ನ್ಯಾಯಾಲಯ ಕಳೆದ ವಾರ ನಿರಾಕರಿಸಿತ್ತು.