×
Ad

​ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯ

Update: 2020-11-17 20:21 IST

ಮಂಗಳೂರು, ನ.17: ಮಂಗಳೂರು ವಿಶ್ವವಿದ್ಯಾನಿಲಯವು ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ನ.17ರಿಂದ ಆರಂಭಿಸಲು ನಿರ್ಧರಿಸಲಾಗಿದೆ.

ತರಗತಿಗೆ ಹಾಜರಾಗಲು ಸಿದ್ಧರಿರುವ ವಿದ್ಯಾರ್ಥಿಗಳು ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಮಾಡಿದ ಒಪ್ಪಿಗೆ ಪತ್ರ ಹಾಜರುಪಡಿ ಸಬೇಕು. (ಒಪ್ಪಿಗೆ ಪತ್ರದ ಮಾದರಿಯನ್ನು ವಿವಿ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ) ವಿದ್ಯಾರ್ಥಿಗಳು ಆರೋಗ್ಯ ಇಲಾಖೆಯಿಂದ ಹೊರಡಿಸಲಾ ಗಿರುವ ಮಾರ್ಗಸೂಚಿಗಳ ಪ್ರಕಾರ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಪ್ರತೀ ವಿದ್ಯಾರ್ಥಿ ಕಡ್ಡಾಯವಾಗಿ ಮಾಸ್ಕನ್ನು ಸರಿಯಾಗಿ ಧರಿಸಬೇಕು. ವಿದ್ಯಾರ್ಥಿಗಳು ಮನೆಯಿಂದ ನೀರು ಮತ್ತು ಊಟ ತರಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ಮೂರು ದಿನಗಳ ಮೊದಲು ಕೋವಿಡ್-19 ಪರೀಕ್ಷೆ ಮಾಡಿಕೊಂಡು ಟೆಸ್ಟ್ ರಿಪೋರ್ಟ್ ನೆಗೆಟಿವ್ ಇದ್ದಲ್ಲಿ ಮಾತ್ರ ತರಗತಿ/ಹಾಸ್ಟೆಲ್‌ಗಳಿಗೆ ಹಾಜರಾಗಬೇಕು. ಭೌತಿಕ ತರಗತಿಗಳಿಗೆ ಹಾಜರಾಗಲು ಬಯಸದ ವಿದ್ಯಾರ್ಥಿಗಳು ಆನ್‌ಲೈನ್ ತರಗತಿಗೆ ಹಾಜರಾಗಬಹುದು ಎಂದು ಮಂಗಳೂರು ವಿವಿ ಕುಲಸಚಿವರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News