×
Ad

ಮೂವರು ಪಾದಚಾರಿಗಳ ಮೇಲೆ ಹುಚ್ಚು ನಾಯಿ ದಾಳಿ

Update: 2020-11-17 20:32 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.17: ಪಾದಚಾರಿಗಳ ಮೇಲೆ ಹುಚ್ಚು ನಾಯಿ ದಾಳಿ ಮಾಡಿರುವ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗುಂಡೇನಹಳ್ಳಿ ಕಿರಣ್ ಎಂಬುವವರು ಸೇರಿ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಗಾಯಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News