ರಾಜ್ಯದಲ್ಲಿ ನ.20ರವರೆಗೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

Update: 2020-11-17 15:04 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.17: ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತೆ ಮುಂದಿನ ಮೂರು ದಿನ ಮುಂದುವರಿಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ನ.18ರಿಂದ ನ.19ರವರೆಗೆ ಬೆಂಗಳೂರು, ಬೆಂ.ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನ.18ರಿಂದ ನ.20ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News