ಮರಾಠಿ ಭಾಷೆಗೂ ಅಭಿವೃದ್ಧಿ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ: ಯಡಿಯೂರಪ್ಪ ಸ್ಪಷ್ಟನೆ

Update: 2020-11-17 15:58 GMT

ಬೆಂಗಳೂರು, ನ.17: ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, 'ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News