ರಿಯಾಯಿತಿ ದರದ ಬಸ್‌ಪಾಸ್‌ಗೆ ಅರ್ಜಿ ಆಹ್ವಾನ
Update: 2020-11-17 21:33 IST
ಉಡುಪಿ, ನ.17: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್‌ಪಾಸು, ವಿಕಲಚೇತನರ ರಿಯಾಯಿತಿ ಬಸ್‌ಪಾಸು, ಅಂಧರ ಉಚಿತ ಬಸ್‌ಪಾಸು, ಸ್ವಾತಂತ್ರ್ಯ ಹೋರಾಟಗಾರರ ಉಚಿತ ಬಸ್‌ಪಾಸು, ಸ್ವಾತಂತ್ರ್ಯ ಹೋರಾಟ ಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್ ಮತ್ತು ಅಪಘಾತ ಪರಿಹಾರ ನಿಧಿಗಳನ್ನು ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅಪ್‌ಲೋಡ್ ಮಾಡಿದ ಅರ್ಜಿ ಪ್ರತಿ ಹಾಗೂ ಪಾಸಿನ ಶುಲ್ಕವನ್ನು ವಿದ್ಯಾರ್ಥಿಗಳು ಶಾಲಾಕಾಲೇಜು ಮುಖಾಂತರ ಕರಾರಸಾ ನಿಗಮದ ಬಸ್ಸು ನಿಲ್ದಾಣದ ಪಾಸ್ ಕೌಂಟರ್‌ನಲ್ಲಿ ಪಾವತಿಸಬೇಕಾಗಿದೆ. ಅರ್ಜಿ ಸಲ್ಲಿಸಿದ ಸೂಕ್ತ ದಾಖಲೆಗಳನ್ನು ಹಾಗೂ ಪಾಸ್ ಶುಲ್ಕವನ್ನು ನಿಗಮದ ಪಾಸ್ ಕೌಂಟರ್‌ನಲ್ಲಿ ನೀಡಿ ಬಸ್ ಪಾಸುಗಳನ್ನು ಪಡೆಯಬಹುದಾಗಿದೆ ಎಂದು ಮಂಗಳೂರು ಕರಾರಸಾಂ ವಿಬಾಗದ ನಿಯಂತ್ರಣಾಧಿಕಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.