ಶಿವಮೊಗ್ಗ: ವಿದ್ಯುತ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

Update: 2020-11-18 07:40 GMT

ಶಿವಮೊಗ್ಗ : ವಿದ್ಯುತ್ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಕರೋನ ಮಹಾಮಾರಿ ರಾಜ್ಯಾದ್ಯಂತ ಆವರಿಸಿದೆ. ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಇತಂಹ ಸಂದರ್ಭದಲ್ಲಿ ರಿಯಾಯಿತಿ ನೀಡಬೇಕಾದ ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರವನ್ನು ಏರಿಕೆ ಮಾಡಿರುವುದನ್ನು ಪ್ರತಿಭಟನಾಕಾರರು ಖಂಡಿಸಿದರು.

ರಾಜ್ಯ ಸರ್ಕಾರ ಕರ್ನಾಟಕ ರಾಜೋತ್ಸವದ ಕೊಡುಗೆಯಾಗಿ ನವೆಂಬರ್ 1 ರಿಂದ ವಿದ್ಯುತ್ ದರ ಪರಿಷ್ಕರಿಸಿ ಸರಾಸರಿ 5.4% ರಂತೆ ಯೂನಿಟ್ ಗೆ ,40 ಪೈಸೆಯಂತೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದಾರೆ. ಇದು ಖಂಡನೀಯ ಎಂದರು. ರಾಜ್ಯದ ಜನರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜನ ದಿನನಿತ್ಯದ ಬದುಕಿಗೆ ಅನಿವಾರ್ಯವಾಗಿ ವಿದ್ಯುತ್ ದರವನ್ನು ಏರಿಸಿರುವ ಕ್ರಮ ಅಕ್ಷಮ್ಯ, ಅಧರ್ಮ, ಜನವಿರೋಧಿ ಮತ್ತು ಅಮಾನವೀಯ ಎಂದು‌ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಕೂಡಲೇ ವಿದ್ಯುತ್ ದರ ಏರಿಕೆ ಆದೇಶವನ್ನು ತಕ್ಷಣದಿಂದಲೇ ಹಿಂಪಡೆಯುವಂತೆ ಆಗ್ರಹಿಸಿದರು. ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ   ಎಚ್.ಎಸ್ ಸುಂದರೇಶ್, ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್, ಮುಖಂಡರಾದ ಬಿ.ಎ ರಮೇಶ್ ಹೆಗಡೆ, ವಿಶ್ವನಾಥ ಕಾಶಿ, ಎಸ್ ರವಿ ಕುಮಾರ್, ಜಿ.ಪಂ. ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್ ಮತ್ತಿತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News