ಗೋವಾದ ಮಾಜಿ ರಾಜ್ಯಪಾಲೆ ಮೃದುಲಾ ಸಿನ್ಹಾ ನಿಧನ
Update: 2020-11-18 18:03 IST
ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕಿ ಹಾಗೂ ಗೋವಾದ ಮಾಜಿ ರಾಜ್ಯಪಾಲೆ ಮೃದುಲಾ ಸಿನ್ಹಾ ಬುಧವಾರ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.
ಬರವಣಿಗೆಯ ಮೂಲಕ ಸಾಹಿತ್ಯ ಲೋಕಕ್ಕೆ ಸಾಕಷ್ಟು ಕೊಡುಗೆ ನೀಡಿರುವ ಸಿನ್ಹಾ ಅವರು ಜನ ಸಂಘ ಕಾಲದಿಂದಲೆ ಬಿಜೆಪಿಯೊಂದಿಗೆ ನಂಟು ಹೊಂದಿದ್ದರು.
ಮೂಲತಃ ಬಿಹಾರದವರಾದ ಸಿನ್ಹಾ ಬಿಜೆಪಿಯ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ, ಗೋವಾದ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿದ್ದರು.
ಸಿನ್ಹಾ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜಗತ್ ಪ್ರತಾಪ್ ನಡ್ಡಾ ಶೋಕ ವ್ಯಕ್ತಪಡಿಸಿದ್ದಾರೆ.