ಮತದಾರರ ನೋಂದಣಿ ಅಭಿಯಾನ
Update: 2020-11-18 18:52 IST
ಉಡುಪಿ, ನ.18: ಜಿಲ್ಲೆಯಾದ್ಯಂತ ಮತದಾರರ ಮಿಂಚಿನ ನೋಂದಣಿ ಅಭಿಯಾನವನ್ನು ನವೆಂಬರ್ 22, 29 ಹಾಗೂ ಡಿಸೆಂಬರ್ 6 ಮತ್ತು 13ರಂದು ಹಮ್ಮಿಕೊಳ್ಳಲಾಗಿದೆ.
ವಿಕಲಚೇತನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನುಕೂಲಕ್ಕಾಗಿ ಮತದಾರರ ಮಿಂಚಿನ ನೋಂದಣಿ ಅಭಿಯಾನವು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದೇ ಇರುವವರು ಈ ಪ್ರಕ್ರಿಯೆಯ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.