ಜೆಡಿಎಸ್ ಕುಂದಾಪುರ ತಾಲೂಕು ಅಧ್ಯಕ್ಷರಾಗಿ ಕಿಶೋರ್ ಕುಮಾರ್ ನೇಮಕ
Update: 2020-11-18 19:01 IST
ಉಡುಪಿ, ನ.18: ಜನತಾದಳ (ಜಾತ್ಯತೀತ) ಪಕ್ಷದ ಕುಂದಾಪುರ ವಿಧಾನ ಸಭಾ ಕ್ಷೇತ್ರದ ನೂತನ ಅಧ್ಯಕ್ಷರನ್ನಾಗಿ ಕಿಶೋರ್ ಕುಮಾರ್ ಕೆ. ಇವರನ್ನು ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ನೇಮಿಸಿದ್ದಾರೆ.
ಜೆಡಿಎಸ್‌ನ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಇವರ ಅನುಮೋದನೆ ಮೇಲೆ ಈ ನೇಮಕಾತಿ ಮಾಡಲಾಗಿದೆ ಎಂದು ಜೆಡಿಎಸ್ ಪ್ರಕಟಣೆ ತಿಳಿಸಿದೆ. ಕಿಶೋರ್‌ಕುಮಾರ್ ಅವರು ಪಕ್ಷದ ಹಿರಿಯ ನಾಯಕರಾಗಿದ್ದು, ಜನತಾ ಪರಿವಾರ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿಯ ಸದಸ್ಯ ರಾಗಿದ್ದರು. ಅಲ್ಲದೇ ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಸದಸ್ಯರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.